దారుణం..సీనియర్ జర్నలిస్టు గౌరీ లంకేష్ హత్య..!

0
207
ಗೌರಿ ಲಂಕೇಶ್‌ ಹತ್ಯೆ ಖಂಡಿಸಿ ನಾನಾ ಕಡೆ ಪ್ರತಿಭಟನೆ
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಹತ್ಯೆ ಮಾಡಿದವರ ಬಂಧನಕ್ಕೆ ಆಗ್ರಹಿಸಿ ರಾಜ್ಯದ ನಾನಾ ಕಡೆ ಪ್ರತಿಭಟನೆ ನಡೆಯುತ್ತಿದೆ. ನಗರ ಸೇರಿದಂತೆ ಕೆಲವೆಡೆ ನಿನ್ನೆ ರಾತ್ರಿಯೇ ಪ್ರತಿಭಟನೆ ಆರಂಭಗೊಂಡಿದೆ.

ಹುಬ್ಬಳ್ಳಿಯ ಕೋರ್ಟ್ ವೃತದಲ್ಲಿ ಕ್ಯಾಂಡಲ್ ಮಾರ್ಚ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಹತ್ಯೆ ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಕಲಬುರಗಿ ಹತ್ಯೆ ಪ್ರಕರಣದ ತನಿಖೆಯಲ್ಲಿ ಮಾಡಿದಂತೆ ವಿಳಂಬ ಮಾಡಬೇಡಿ. ತಕ್ಷಣ ಆರೋಪಿಗಳನ್ನು ಬಂಧಿಸಿ. ಇಲ್ಲವಾದರೆ ಮುಖ್ಯಮಂತ್ರಿಗಳೇ ಬಿಟ್ಟು ಕೆಳಗಿಳಿಯಿರಿ ಎಂದು ಆಗ್ರಹಿಸಿದರು. ಕರವೇ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಗೌರಿ ಲಂಕೇಶ್ ಹತ್ಯೆ ಖಂಡಿಸಿ ನಾನಾ ಸಂಘಟನೆಗಳು ನಗರದ ಎಂಜಿ ರಸ್ತೆಯ ಗಾಂಧಿವನದಲ್ಲಿ ಪ್ರತಿಭಟನೆ ನಡೆಸುತ್ತಿವೆ.ಕಸಾಪ, ದಲಿತ ಸಂಘಟನೆಗಳು, ಪತ್ರಕರ್ತರ ಸಂಘ, ಕನ್ನಡಪರ ಸಂಘಟನೆಗಳು ಭಾಗಿಯಾಗಿವೆ.

LEAVE A REPLY

Please enter your comment!
Please enter your name here